ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗೆ ಅವಕಾಶವಿಲ್ಲ: ಮುರಳೀಧರ ರಾವ್
Update: 2017-04-30 13:28 IST
ಬೆಂಗಳೂರು, ಎ.30: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗೆ ಅವಕಾಶವಿಲ್ಲ. ನಾಯಕರು ಪಕ್ಷವನ್ನು ಹೊರತುಪಡಿಸಿ ಬೇರಾವುದೇ ಸಂಘಟನೆ ಮಾಡಬಾರದು ಎಂದು ಕರ್ನಾಟಕದ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದರು .
"ರಾಷ್ಟ್ರೀಯ ನಾಯಕರು ಎಲ್ಲವನ್ನು ಗಮನಿಸುತ್ತಿದ್ದಾರೆ. ನಾನಾಗಲಿ, ಈಶ್ವರಪ್ಪರಾಗಲೀ ಪಕ್ಷದ ಚೌಕಟ್ಟು ಮೀರಿದರೆ ಅವರು ಕ್ರಮ ಕೈಗೊಳ್ಳುತ್ತಾರೆ. ಈಗಾಗಲೇ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದರು.