×
Ad

ಗಾಂಜಾ ಮಾರಾಟ ಯತ್ನ : ಇಬ್ಬರ ಬಂಧನ

Update: 2017-04-30 17:46 IST

ಮೂಡುಬಿದಿರೆ,ಎ.30: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮೈಸೂರು ಮೂಲದ ಇಬ್ಬರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮೈಸೂರಿನ ಮೇಟಿಗಹಳ್ಳಿ ನಿವಾಸಿ ಸಂತೋಷ್(22)ಮತ್ತು ಮೈಸೂರು ಶಾರದಾ ದೇವಿ ನಗರದ ನಂದ ಕುಮಾರ್(20)ಎಂದು ಗುರುತಿಸಲಾಗಿದೆ. ಆರೋಪಿಗಳು ಶುಕ್ರವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ಬೈಕ್‌ನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದಾಗ ಗಸ್ತಿನಲ್ಲಿ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬಂದಿಗಳು ನಿಲ್ಲಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ತಮ್ಮ ಪರಿಚಯಸ್ಥ ವಿದ್ಯಾರ್ಥಿಗಳು ಮತ್ತು ಇತರ ಕೆಲ ವ್ಯಕ್ತಿಗಳಿಗೆ ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದರೆನ್ನಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News