ಭಯೋತ್ಪಾದನಾ ರಾಜಕೀಯದ ವಿರುದ್ಧ ಒಂದಾಗಲು ಕರೆ
ಮಡಿಕೇರಿ ಎ.30 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಭಯೋತ್ಪಾದನಾ ರಾಜಕೀಯದ ವಿರುದ್ಧ ಒಂದಾಗೋಣಅಭಿಯಾನದ ಭಾಗವಾಗಿ ಅಯ್ಯಂಗೇರಿಯಲ್ಲಿ ಸಾರ್ವಜನಿಕ ಸಭೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ಸಂವಿಧಾನವನ್ನು ಒಪ್ಪದ ಶಕ್ತಿಗಳು ಆಡಳಿತ ನಡೆಸುವ ಸಂದರ್ಭದಲ್ಲಿ ಸಂವಿಧಾನ ವಿರೋಧಿಗಳಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಮನುಷ್ಯನ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದ್ದು, ಗೋವಿನ ಪ್ರಾಣಕ್ಕೆ ಶ್ರೇಷ್ಠತೆ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಸಂವಿಧಾನವನ್ನು ತಿರಸ್ಕರಿಸಿ ಮಾನವನ ಮೇಲೆ ನಡೆಯುತ್ತಿರುವ ರಾಜಕೀಯ ಪ್ರೇರಿತ ದಾಳಿಗಳು ಭಯೋತ್ಪಾದನಾ ಕೃತ್ಯವಾಗಿದೆ ಎಂದು ಟೀಕಿಸಿದರು.
ಪಕ್ಷದ ರಾಜ್ಯ ಮುಖಂಡ ಶಾಫಿ ಬೆಳ್ಳಾರೆ ಮಾತನಾಡಿ, ದೇಶದ ವಿವಿಧ ಭಾಗಗಳಲ್ಲಿ ಅಮಾಯಕರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಮಂಗಳೂರಿನಲ್ಲಿ ಖುರೈಷಿ ಮೇಲೆ ನಡೆದ ಹಲ್ಲೆ, ಗೋವಿನ ವಿಷಯದಲ್ಲಿ ಅಕ್ಲಾಖ್ ಹಾಗೂ ಉನಾದಲ್ಲಿ ದಲಿತರ ಮೇಲೆ ನಡೆಸಿದ ಅಕ್ರಮಗಳು ಇದರ ಭಾಗವಾಗಿದೆ ಎಂದು ಆರೋಪಿಸಿದರು. ಭಯೋತ್ಪಾದನಾ ರಾಜಕೀಯದ ವಿರುದ್ಧ ಎಲ್ಲರೂ ಒಂದಾಗಬೇಕಾಗಿದೆ ಎಂದರು.