×
Ad

​ಪಕ್ಷದೊಳಗಿನ ಬಿಕ್ಕಟ್ಟು ಶೀಘ್ರದಲ್ಲೆ ಪರಿಹಾರ: ಬಿಎಸ್‌ವೈ ವಿಶ್ವಾಸ

Update: 2017-05-01 16:44 IST

ಉತ್ತರ ಕನ್ನಡ, ಮೇ 1: ಬಿಜೆಪಿಯಲ್ಲಿ ಪ್ರಸ್ತುತ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಒಂದು ವಾರದೊಳಗೆ ಬಗೆಹರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ಇಲ್ಲಿನ ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪಕ್ಷದಲ್ಲಿ ಭಿನ್ನಮತ ಮಾಡಬಾರದು ಎಂದು ಖಡಕ್ಕಾಗಿ ಎಚ್ಚರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ವರಿಷ್ಠರ ಗುರಿ ಮತ್ತು ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಮುಂದೆ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತದ ಹೇಳಿಕೆಗಳಿಗೆ ಆಸ್ಪದ ನೀಡುವುದಿಲ್ಲ ಎಂದ ಯಡಿಯೂರಪ್ಪ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News