ಕ್ರಿಕೆಟ್ ಬೆಟ್ಟಿಂಗ್: ಆರೋಪಿಯ ಸೆರೆ
Update: 2017-05-01 18:22 IST
ಬೆಂಗಳೂರು, ಮೇ 1: ಐಪಿಎಲ್ ಟಿ-20 ಸರಣಿಯ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಸಿಸಿಬಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಜಾಜಿನಗರ ನಿವಾಸಿ ವಿಷ್ಣು (28) ಎಂದು ಗುರುತಿಸಲಾಗಿದೆ. ಆರೋಪಿಯು ಇಲ್ಲಿನ ಮಾಗಡಿ ರಸ್ತೆಯಲ್ಲಿನ ರಾಜಾಜಿನಗರ ಆರನೆ ಬ್ಲಾಕ್‌ನ ಮನೆಯೊಂದರಲ್ಲಿ ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 32 ಸಾವಿರ ರೂ., ಒಂದು ಸ್ಯಾಮ್‌ಸಂಗ್ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಾಗಡಿ ರಸ್ತೆ ಠಾಣಾ ಪೊಲೀಸರು ಮೊಕದ್ದಮೆ ದಾಖಲಸಿದ್ದು, ತನಿಖೆ ಕೈಗೊಂಡಿದ್ದಾರೆ.