ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜ್‌ನಲ್ಲಿ ಸಮನ್ವಯ ಶಿಕ್ಷಣ ಅರಿವು ಕಾರ್ಯಾಗಾರ
Update: 2017-05-02 15:59 IST
ಕೋಡಿ, ಮೇ 2: ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಸಮನ್ವಯ ಶಿಕ್ಷಣ ಕುರಿತು ಕಾರ್ಯಾಗಾರ ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜ್‌ನಲ್ಲಿ ಇತ್ತೀಚೆಗೆ ನಡೆಯಿತು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಮಹೇಶ್ವಂದ್ರ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಮನ್ವಯ ಶಿಕ್ಷಣದ ಪರಿಪೂರ್ಣ ಮಾಹಿತಿ ನೀಡಿದರು. ಸಾಮಾನ್ಯ ಶಿಕ್ಷಣದಲ್ಲಿ ಶಾಲೆಗಳಲ್ಲಿ ವಿಶೇಷ ಮಕ್ಕಳನ್ನು ಗುರುತಿಸುವುದು ಹೇಗೆ ಮತ್ತು ಪರಿಹಾರ ಹೇಗೆ ಎಂಬುದರ ಬಗ್ಗೆ ಅರಿವು ಮತ್ತು ಕಾರ್ಯತಂತ್ರಗಳ ಬಗ್ಗೆ ವಿವರಿಸಿದರು.