×
Ad

ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಜೂಜಾಟ: 95 ಜನರ ಬಂಧನ, ಲಕ್ಷಾಂತರ ರೂ. ವಶ

Update: 2017-05-02 18:56 IST

ಶಿವಮೊಗ್ಗ, ಮೇ. 2: ಜೂಜಾಟ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ನಗರದ ಮೂರು ರಿಕ್ರಿಯೇಷನ್ ಕ್ಲಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 95 ಜನರನ್ನು ಬಂಧಿಸಿ, 6.60 ಲಕ್ಷ ರೂ. ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಕ್ಲಬ್‌ಗಳಲ್ಲಿ ಜೂಜಾಟ ನಡೆಯುತ್ತಿರುವ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ವಿವಿಧ ಹಂತದ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸರಿಸುಮಾರು 100 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಹಾಗೂ ಡಿಸಿಬಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News