×
Ad

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಮೃತ್ಯು

Update: 2017-05-02 19:10 IST

ಚಾಮರಾಜನಗರ, ಮೇ 2: ಭಾರತ-ಪಾಕಿಸ್ತಾನ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಾಮರಾಜನಗರ ಜಿಲ್ಲೆಯ ಬಿಸಿಎಫ್ ಯೋಧರೊಬ್ಬರು ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಎನ್.ಪುಟ್ಟಸ್ವಾಮಿ 19 ವರ್ಷಗಳಿಂದ ಬಿಎಸ್‌ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅಲ್ಲಿನ ಮಿಲಿಟರಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಜನಿಸಿದ್ದ ಪುಟ್ಟಸ್ವಾಮಿಯವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಸುಮಾರು 3:30ರ ವೇಳೆಗೆ ಯೋಧ ಪುಟ್ಟಸ್ವಾಮಿಯವರ ಮೃತದೇಹ ಬೆಂಗಳೂರಿಗೆ ಮಿಲಿಟರಿ ಗೌರವಗಳೊಂದಿಗೆ ಆಗಮಿಸಲಿದ್ದು, ಬಳಿಕ 9:30 ಹೊತ್ತಿಗೆ ಚಾಮರಾಜನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದ್ದು, ಬುಧವಾರ ಕೂಡ್ಲೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News