×
Ad

​ಪೊಲೀಸ್ ಕಾಯ್ದೆಗೆ ತಿದ್ದುಪಡಿಯಾಗಲಿ: ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪಾಡಿ

Update: 2017-05-02 20:14 IST

ಮಂಗಳೂರು, ಮೇ 2: ಪೊಲೀಸ್ ದೌರ್ಜನ್ಯಗಳು ಮುಂದುವರಿಯುತ್ತಿರುವ ಇಂದಿನ ದಿನಗಳಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪಾಡಿ ಅಭಿಪ್ರಾಯಪಟ್ಟಿದ್ದಾರೆ.

ಅಹ್ಮದ್ ಖುರೇಶಿ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯದ ವಿರುದ್ಧ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ನಗರ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾದ ‘ಮಂಗಳೂರು ಚಲೋ’ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ಹೋರಾಟ ನಡೆಯಬೇಕು. ಈ ಮೂಲಕ ಮಾನವ ಹಕ್ಕು ಉಲ್ಲಂಘನೆಯಾಗಿರುವುದು ಸಾಬೀತುಗೊಂಡಲ್ಲಿ ಅಂತಹ ಪೊಲೀಸ್ ಅಧಿಕಾರಿಯನ್ನು ಇಲಾಖೆಯಿಂದ ತಕ್ಷಣ ಕೈಬಿಡುವಂತಾಗಬೇಕು. ಎಲ್ಲ ಸಮುದಾಯದವರೂ ಪೊಲೀಸರಿಂದ ತೊಂದರೆಗೊಳಗಾಗಿದ್ದಾರೆ. ಮುಸ್ಲಿಮ್ ಸಮುದಾಯದಲ್ಲಿನ ಯುವಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಗಳು ಹೆಚ್ಚಿವೆ ಎಂದರು.

ಪ್ರಕರಣದ ವಿಚಾರಣೆಯ ನೆಪದಲ್ಲಿ ರಾತ್ರಿ ಸಮಯದಲ್ಲಿ ಮನೆಗಳಿಗೆ ಅಕ್ರಮ ಪ್ರವೇಶ ಮಾಡಿ ಯುವಕರನ್ನು ಠಾಣೆಗೆ ಕರೆದೊಯ್ಯುವುದು, ಅಕ್ರಮವಾಗಿ ಬಂಧನದಲ್ಲಿಟ್ಟು ಹಿಂಸೆ ನೀಡುವುದು, ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಬಲವಂತ ಮಾಡುವುದು ಕಾನೂನುಬಾಹಿರವಾಗಿದೆ. ಇದರಿಂದಾಗಿ ಇಂದು ಜನರು ಪೊಲೀಸರ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದವರು ಅಭಿಪ್ರಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News