×
Ad

​ರಿಕ್ರಿಯೇಷನ್ ಕ್ಲಬ್‌ಗಳಲ್ಲಿ ಜೂಜಾಟ 95 ಮಂದಿಯ ಬಂಧನ -ಲಕ್ಷಾಂತರ ರೂ. ವಶ

Update: 2017-05-02 23:10 IST

ಶಿವಮೊಗ್ಗ, ಮೇ 2: ಜೂಜಾಟ ನಡೆಯುತ್ತಿದ್ದ ಆರೋಪದ ಮೇರೆಗೆ ನಗರದ ಮೂರು ರಿಕ್ರಿಯೇಷನ್ ಕ್ಲಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ 95 ಜನರನ್ನು ಬಂಧಿಸಿ, 6.60 ಲಕ್ಷ ರೂ. ವಶಕ್ಕೆ ಪಡೆದುಕೊಂಡಿರುವ ಘಟನೆ ವರದಿಯಾಗಿದೆ. ಕ್ಲಬ್‌ಗಳಲ್ಲಿ ಜೂಜಾಟ ನಡೆಯುತ್ತಿರುವ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ವಿವಿಧ ಹಂತದ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸರಿಸುಮಾರು 100 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಹಾಗೂ ಡಿಸಿಬಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಪತ್ರಿಕಾ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

ತೀವ್ರ ಕಾರ್ಯಾಚರಣೆ: ಕಳೆದೊಂದು ತಿಂಗಳಿನಿಂದ ಶಿವಮೊಗ್ಗ ನಗರದಲ್ಲಿ ಜೂಜು ಅಡ್ಡೆಗಳ ಮೇಲೆ ಪೊಲೀಸ್ ಇಲಾಖೆ ಸಮರ ಸಾರಿದ್ದು, ಇಲ್ಲಿಯವರೆಗೂ ವಿವಿಧ ರೀತಿಯ ಜೂಜಾಟದಲ್ಲಿ ತೊಡಗಿದ್ದ 100 ಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News