ಡಾ.ಬಿಳಿಮಲೆಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’
Update: 2017-05-02 23:35 IST
ಉಡುಪಿ, ಮೇ 2: ಉಡುಪಿ ಯಕ್ಷಗಾನ ಕಲಾರಂಗವು ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಹೆಸರಿನಲ್ಲಿ ಸ್ಥಾಪಿಸಿರುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ವಿದ್ವಾಂಸ, ದಿಲ್ಲಿಯ ಜವಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಭಾರತೀಯ ಭಾಷೆಗಳ ಕೇಂದ್ರದ ಕನ್ನಡ ಪ್ರಾಧ್ಯಾಪಕ ಡಾ.ಪುರುಷೋತ್ತಮ ಬಿಳಿಮಲೆ ಆಯ್ಕೆಯಾಗಿದ್ದಾರೆ
ಪ್ರಶಸ್ತಿಯು 40,000 ರೂ.ಗಳನ್ನು ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಮೇ 21ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಾ.ಪುರುಷೋತ್ತಮ ಬಿಳಿಮಲೆ ಅವರ ಕುರಿತ ವಿಚಾರಗೋಷ್ಠಿ, ಸಂವಾದ, ಕಲಾ ಕಾರ್ಯಕ್ರಮಗಳು ಜರಗಲಿವೆ ಎಂದು ಕಲಾರಂಗದ ಅಧ್ಯಕ್ಷ ಕೆ.ಗಣೇಶ್ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.