ಕುಮಟಾ: ಮಂಗಳೂರಿಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿ
Update: 2017-05-03 10:27 IST
ಕುಮಟಾ, ಮೇ 3: ಚಾಲಕನ ನಿಯತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್‌ವೊಂದು ರಸ್ತೆಗಡ್ಡವಾಗಿ ಉರುಳಿಬಿದ್ದ ಘಟನೆ ಕುಮಟಾ ಪಟ್ಟಣದ ಗಿಬ್ ವೃತ್ತದ ಬಳಿ ಇಂದು ಬೆಳಗ್ಗೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅವಘಡ ಸಂಭವಿಸಿದೆ. ಟ್ಯಾಂಕರ್ ಗೋವಾದಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಟ್ಯಾಂಕರ್ ಖಾಲಿ ಇದ್ದ ಹಿನ್ನಲೆಯಲ್ಲಿ ಅನಾಹುತ ತಪ್ಪಿದೆ. ಘಟನೆಯ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.