ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2017-05-03 22:03 IST
ಕಾರ್ಕಳ, ಮೇ 3: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳ್ಮಣ್ ಗ್ರಾಮದ ಜಂತ್ರ ಬಸ್‌ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ಪ್ರಕಾಶ್ ಎಂದು ಗುರುತಿಸಲಾಗಿದೆ. ಬೆಳ್ಮಣ್ ಕಡೆಯಿಂದ ಹೋಗುತ್ತಿದ್ದ ಕಾರು ಮಂಚಕಲ್ ಕಡೆಯಿಂದ ಬರುತ್ತಿದ್ದ ನೋಂದಣಿಯಾಗದ ಹೊಸ ಡಿಸ್ಕವರಿ ಬೈಕ್‌ಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸವಾರ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.