ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ

Update: 2017-05-03 17:07 GMT

ಬೆಂಗಳೂರು, ಮೇ 3: ರಾಜ್ಯ ಸರಕಾರವು 10 ಮಂದಿ ಐಎಎಫ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನೂಪ್ ರೆಡ್ಡಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ)ಯನ್ನಾಗಿ ಭಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಅಜಯ್‌ಮಿಶ್ರಾ-ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಅರಣ್ಯ ಸಂರಕ್ಷಣೆ), ಮೀನಾಕ್ಷಿ ನೇಗಿ-ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ನೇಮಕಾತಿ), ರಾಜ್‌ಕುಮಾರ್ ಶ್ರೀವಸ್ತ-ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಕಾರ್ಯ ಯೋಜನೆ).

ರಾಧಾ ದೇವಿ-ಕಲಬುರ್ಗಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಂಗೇಗೌಡ- ಬೆಂಗಳೂರಿನ ಕಿಯೋನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಶ್ರೀಕಾಂತ್ ವಿ.ಹೊಸೂರ್-ಧಾರವಾಡದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವಿ.ವಿಜಯ್‌ಮೋಹನ್ ರಾಜ್-ಚಿಕ್ಕಮಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ.

ಕೆ.ಡಿ.ಉಡುಪುಡಿ-ಬೆಳಗಾವಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪಿ.ಬಿ.ಕರುಣಾಕರ್-ಮೈಸೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News