ಸೈಂಟ್ ಆ್ಯಗ್ನೆಸ್ ಕಾಲೇಜಿನಲ್ಲಿ ಘಟಿಕೋತ್ಸವ
Update: 2017-05-03 23:57 IST
ಮಂಗಳೂರು, ಮೇ 3: ಸೈಂಟ್ ಆಗ್ನೆಸ್ ಕಾಲೇಜಿನ (ಸ್ವಾಯತ್ತ) 6ನೆ ಘಟಿಕೋತ್ಸವ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಕೆ.ಬೈರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಪೊಸ್ಟೊಲಿಕ್ ಕಾರ್ಮೆಲ್ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಭಗಿನಿ ಐಡಾ ಬರ್ಬೋಝಾ ಅಧ್ಯ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ 21 ಮಂದಿ ರ್ಯಾಂಕ್ ವಿಜೇತರು ಸೇರಿದಂತೆ 655 ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.
ಸೈಂಟ್ ಆ್ಯಗ್ನೆಸ್ ಕಾನ್ವೆಂಟ್‌ನ ಸುಪೀರಿಯರ್ ಮತ್ತು ಕಾಲೇಜಿನ ಜಂಟಿ ಕಾರ್ಯದರ್ಶಿ ಭಗಿನಿ ಡಾ. ಮರಿಯಾ ರೂಪಾ ಉಪಸ್ಥಿತರಿದ್ದರು.
ವಾಣಿಜ್ಯ ಪಿಜಿ ವಿಭಾಗದ ಮುಖ್ಯಸ್ಥ ಡಾ. ಕ್ಯಾಥರಿನ್ ನಿರ್ಮಲಾ ಸ್ವಾಗತಿಸಿದರು. ಬಿಬಿಎ ವಿಭಾಗದ ಮುಖ್ಯಸ್ಥೆ ಚೇತನಾ ವಂದಿಸಿದರು.
2007ರಲ್ಲಿ ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಂಡ ಸೈಂಟ್ ಆ್ಯಗ್ನೆಸ್ ಕಾಲೇಜಿನಲ್ಲಿ 2008ರಿಂದ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ.