×
Ad

ಗೋವಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರಿಗೆ ಕಾದಿದೆ ಜೈಲು ಶಿಕ್ಷೆ

Update: 2017-05-04 16:17 IST

ಪಣಜಿ,ಮೇ 4 : ಗೋವಾದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರಿಗೆ ಜೈಲು ಶಿಕ್ಷೆ ಕಾದಿದೆ. ಯಾರೇ ಆದರೂ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವುದು ಕಂಡು ಬಂದಲ್ಲಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಐಪಿಸಿ ಸೆಕ್ಷನ್ 34ರ ಅನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ (ಉತ್ತರ ಗೋವಾ) ಕಾರ್ತಿಕ್ ಕಶ್ಯಪ್ ಹೇಳಿದ್ದಾರೆ.

ಕಾಲುನ್‌ಗೇಟ್ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರ, ಪ್ರವಾಸೋದ್ಯಮ ಪ್ರತಿನಿಧಿಗಳ ಹಾಗೂ ಪೊಲೀಸರ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಕೂಡ ಪೊಲೀಸರಿಗೆ ಅಗತ್ಯ ಮಾಹಿತಿ ನೀಡಿದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಇತರರಿಗೆ ತೊಂದರೆಯುಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಪೊಲೀಸ್ ಇಲಾಖೆ ಹೇಳಿದೆ.

ರಾತ್ರಿ ಹೊತ್ತು ಪ್ರವಾಸಿಗರು ಬೀಚ್ ಗಳಲ್ಲಿ ಕುಳಿತುಕೊಂಡು ಮದ್ಯ ಸೇವಿಸುತ್ತಿರುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News