ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ
Update: 2017-05-06 17:35 IST
ಉಳ್ಳಾಲ, ಮೇ 6: ನಗರದ ಜೆಪ್ಪು ಮೋರ್ಗನ್ಸ್‌ಗೇಟ್ ಬಳಿ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಂಸುದ್ದೀನ್ ಎಂಬವರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿ.ಸಿ.ಸಿ. ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರ ನೇತೃತ್ವದ ನಿಯೋಗವು ಕಮೀಷನರ್ ಅವರನ್ನು ಭೇಟಿಯಾಗಿ ಒತ್ತಾಯಿಸಿತು.
ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ದ.ಕ.ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಎನ್.ಎಸ್.ಕರೀಂ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಉಳ್ಳಾಲ ಪುರಸಭೆ ಸದಸ್ಯ ಮುಹಮ್ಮದ್ ಮುಕ್ಕಚ್ಚೇರಿ, ಉಮ್ಮರ್ ಪಜೀರ್, ನಝರ್ ಷಾ, ಪಿಯೋಸ್, ಮುಸ್ತಫಾ ಹರೇಕಳ, ಆಲ್ವಿನ್ ಕೋಟೆಕಾರ್, ನಾಸೀರ್ ಸಾಮಣಿಗೆ, ಹಮೀದ್ ಕಿನ್ಯಾ, ಹನೀಫ್ ಕೆ.ಎಂ.ಮೊದಲಾದವರು ಉಪಸ್ಥಿತರಿದ್ದರು.