×
Ad

​ಕೃಷ್ಣ ಮೃಗಗಳ ಬೇಟೆ: ಆರೋಪಿಗಳ ಬಂಧನ

Update: 2017-05-06 19:17 IST

ಕಾರವಾರ, ಮೇ 6: ಎರಡು ಕೃಷ್ಣ ಮೃಗಗಳನ್ನು ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಮಾಂಸ ಹಾಗೂ ಚರ್ಮವನ್ನು ವಶಪಡಿಸಿಕೊಂಡಿದ್ದಾರೆ.

ಮಜೀದ್ ಸಾಬ್ ಹಾಗೂ ಅಬ್ದುಲ್ ಕರೀಂ ಬಂಧಿತ ಆರೋಪಿಗಳು. ಆರೋಪಿಗಳು ಶಿರಸಿಯ ಅಂಡಗಿ ಗ್ರಾಮದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಎರಡು ಕೃಷ್ಣ ಮೃಗಗಳನ್ನು ಬೇಟೆಯಾಡಿದ ಬಗ್ಗೆ ಸೂಕ್ತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಎರಡು ಬೈಕ್, ಒಂದು ಮಾರುತಿ ಕಾರು, ಎರಡು ಬಂದೂಕು ಹಾಗೂ ಇನ್ನಿತರ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರಸಿ ಎಸಿಎಫ್ ಅಶೋಕ ಭಟ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News