ಕೊಕೇನ್ ಮಾರಾಟ: ವಿದೇಶಿ ಪ್ರಜೆಯ ಬಂಧನ

Update: 2017-05-06 17:58 GMT

ಬೆಂಗಳೂರು, ಮೇ 6: ಮಾದಕ ವಸ್ತು ಕೊಕೇನ್ ಮಾರಾಟ ಜಾಲದಲ್ಲಿ ತೊಡಗಿದ್ದ ಆರೋಪದ ಮೇಲೆ ವಿದೇಶಿ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾ ದೇಶದ ಫ್ರಾಂಕ್ ಅಮೋಸ್(41) ಬಂಧಿತ ವಿದೇಶಿ ಪ್ರಜೆ ಎಂದು ಪೊಲೀಸರು ಗುರುತಿಸಿದ್ದಾರೆ.

ಪುಲಕೇಶಿ ನಗರದ ಥಾಮ್ಸ್ ಬೇಕರಿ ಹತ್ತಿರದಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಟ್ಟಡದ ಬಳಿ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯಿಂದ ಒಟ್ಟು 15 ಸಾವಿರ ರೂ. ಮೌಲ್ಯದ 6 ಗ್ರಾಂ ಮಾದಕ ವಸ್ತು ಕೊಕೇನ್, ಬೈಕ್, ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಇಲ್ಲಿನ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News