ಐಎಎಸ್, ಕೆಎಎಸ್ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 6: ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
www.backwardclasses.kar.nic.inಅರ್ಹ ಅಭ್ಯರ್ಥಿಗಳು ಅಂಗೀಕೃತ ವಿವಿಯಿಂದ ಪದವಿ ಪಡೆ ದಿರಬೇಕು. ಬೆಂಗಳೂರು, ಮೈಸೂರು, ಕಲಬುರ್ಗಿ, ಬೆಳಗಾವಿ, ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಹಾಗೂ ಕೊಪ್ಪಳದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ದಿನಾಂಕ ಹಾಗೂ ಸಮಯವನ್ನು ಮುಂದೆ ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 20. ಮಾಹಿತಿಗೆ ಇಲಾಖಾ ವೆಬ್‌ಸೈಟ್ ಅನ್ನು ನೋಡಬಹುದು. ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಾಗ ತಾಂತ್ರಿಕ ತೊಂದರೆ ಕಂಡು ಬಂದಲ್ಲಿ ದೂ.ಸಂ.:080-65970009ನ್ನು ಸಂಪರ್ಕಿಸಬಹುದು. ವಿವರಗಳಿಗಾಗಿ ದೂ.ಸಂ.: 0820- 2574881ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.