ಬಂಟ್ವಾಳದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿ: ರೈ

Update: 2017-05-06 18:10 GMT

ಬಂಟ್ವಾಳ, ಮೇ 6: ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ನಡೆ ಯುತ್ತಿದ್ದು, ಕರೋಪಾಡಿಯಲ್ಲಿ ಪ್ರಾಯೋಗಿಕವಾಗಿ ನೀರು ಒದಗಿಸಲಾ ಗುತ್ತಿದೆ. ಸಂಗಬೆಟ್ಟು ಯೋಜನೆ ಪೂರ್ಣ ಗೊಂಡಿದ್ದು, ಮಾಣಿಯಲ್ಲಿ ಕಾಮಗಾರಿ ಆರಂಭಗೊಂಡಿದೆ. ಸರಪಾಡಿ ಹಾಗೂ ನರಿಕೊಂಬು ಯೋಜನೆಗಳು ಕ್ಯಾಬಿನೆಟ್ ಅನುಮೋದನೆಗೆ ಬಾಕಿ ಇವೆೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. 

ಕಡೇಶ್ವಾಲ್ಯ ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಜನಸ್ಪಂದನ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಕುಡಿಯುವ ನೀರಿಗೆ 1.7 ಕೋ.ರೂ. ಟಾಸ್ಕ್‌ಫೋರ್ಸ್ ಯೋಜನೆಯನ್ವಯ ಅನುದಾನ ಮೀಸಲಿರಿಸಲಾಗಿದೆ. ಬರ ಪರಿಹಾರಕ್ಕೆಂದು 1 ಕೋ.ರೂ. ಒದಗಿಸಲಾಗಿದೆ, ಮೂಲರಪಟ್ನದಲ್ಲಿ ಕಿಂಡಿ ಅಣೆಕಟ್ಟಿನ ನಿರ್ಮಾಣ ಅಂತಿಮ ಹಂತ ದಲ್ಲಿದ್ದು, 5 ಕೋ.ರೂ. ವಿನಿಯೋಗಿಸಲಾಗಿದೆ ಎಂದರು. ಬಿ.ಸಿ.ರೋಡ್‌ನ ಸರ್ಕಲ್‌ನಿಂದ ಜಕ್ರಿಬೆಟ್ಟುವರೆಗೆ ಕಾಂಕ್ರಿಟ್ ರಸ್ತೆಗೆ 70 ಕೋ.ರೂ., ಪಂಜೆ ಮಂಗೇಶರಾಯ ಭವನ ನಿರ್ಮಾಣಕ್ಕೆ 3 ಕೋ.ರೂ., ನಗರೋತ್ಥಾನ ಯೋಜನೆಯಡಿ ಪುರ ಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀ ಕರಣ, ಬಂಟ್ವಾಳ ಪಾಲಿಟೆಕ್ನಿಕ್ ರಸ್ತೆಗೆ 2 ಕೋ.ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು. ಸಿರಿಚಂದನವನ, ದೈವೀವನಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಬಂಟ್ವಾಳ ಪ್ರವಾಸಿ ಬಂಗಲೆ ಬಳಿ ಅರಣ್ಯ ಇಲಾಖೆಯ ವತಿಯಿಂದ ಟ್ರೀಪಾರ್ಕ್ ನಿರ್ಮಾಣ, ಸಿಆರ್‌ಎಫ್ ರಸ್ತೆಗಳ ಡಾಮರೀಕರಣ, ತಾಲೂಕಿನ ಎಲ್ಲ ರಸ್ತೆಗಳ ಅಭಿವೃದ್ಧಿ ಒಂದು ವರ್ಷದೊಳಗೆ ಬಾಕಿ ಕಾರ್ಯ ಪೂರ್ತಿ ಗೊಳಿಸಲಾಗುವುದು ಎಂದು ಹೇಳಿದರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮಂಜುಳಾ, ಮಲ್ಲಿಕಾ, ಕೆಡಿಪಿ ಸದಸ್ಯೆ ಜಯಂತಿ, ಕಡೇಶ್ವಾಲ್ಯ ಗ್ರಾಪಂ ಅಧ್ಯಕ್ಷೆ ಶ್ಯಾಮಲಾ ಎಸ್. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ತಾಪಂ ಇಒ ಸಿಪ್ರಿಯಾನ್ ಮಿರಾಂದಾ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News