ರೈಲ್ವೆ ನಿಲ್ದಾಣದಲ್ಲಿರುವ ಪ್ರೀಪೇಡ್ ಸರ್ವಿಸ್ ಸೆಂಟರ್‌ ಗೆ ಕಮಿಷನರ್ ಭೇಟಿ

Update: 2017-05-06 18:10 GMT

ಮಂಗಳೂರು, ಮೇ 6: ನಗರ ಕೇಂದ್ರ ರೈಲ್ವೇ ನಿಲ್ದಾಣದ ಪ್ರಯಾಣಿಕರಲ್ಲಿ ಆಟೋ ಚಾಲಕರು ಹೆಚ್ಚಿನ ದರವನ್ನು ವಸೂಲು ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶನಿವಾರ ನಗರ ಪೊಲೀಸ್ ಆಯುಕ್ತರು ಕೇಂದ್ರ ರೈಲ್ವೆ ನಿಲ್ದಾಣದಲ್ಲಿರುವ ಪ್ರೀಪೇಡ್ ಸರ್ವಿಸ್ ಸೆಂಟರ್‌ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಡಿಸಿಪಿ ಡಾ.ಸಂಜೀವ ಪಾಟೀಲ್, ಎಸಿಪಿ ತಿಲಕ್‌ಚಂದ್ರ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಆಟೋ ಚಾಲಕರು ಪ್ರಯಾಣಿಕರಿಂದ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ವಸೂಲು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಮಿಷನರ್ ಈ ಭೇಟಿ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News