ಕಾಶ್ಮೀರದಲ್ಲಿ ಉಗ್ರರ ದಾಳಿ: ಒಬ್ಬ ಪೊಲೀಸ್, ಇಬ್ಬರು ನಾಗರಿಕರು ಮೃತ್ಯು

Update: 2017-05-07 03:44 GMT

ಶ್ರೀನಗರ, ಮೇ 7: ಭಯೋತ್ಪಾದಕ ದಾಳಿಯೊಂದರಲ್ಲಿ ಒಬ್ಬ ಪೊಲೀಸ್ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಿರ್ ಬಝಾರ್ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತವೊಂದರ ನಂತರ ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಕಾರಿನಲ್ಲಿ ಆಗಮಿಸಿದ ಉಗ್ರರು ದಾಳಿ ನಡೆಸಿದ್ದು, ಪೊಲೀಸರ ಪ್ರತಿದಾಳಿಯಿಂದ ಒಬ್ಬ ಭಯೋತ್ಪಾದಕ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ.

“ಮೂವರು ಉಗ್ರರು ದಾಳಿಯಲ್ಲಿ ಭಾಗವಹಿಸಿದ್ದು, ಒಬ್ಬನನ್ನು ಕೊಲ್ಲಲಾಗಿದೆ. ಮತ್ತೊಬ್ಬ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಪೊಲೀಸ್ ಹಾಗೂ ಇಬ್ಬರು ನಾಗರಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ” ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಎಸ್. ಪಿ. ವೈದ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News