×
Ad

ಕಾಡಾನೆ ದಾಳಿ: ಇಬ್ಬರು ಸಿಆರ್ ಪಿಎಫ್ ಯೋಧರು ಬಲಿ

Update: 2017-05-07 13:04 IST

ಆನೇಕಲ್, ಮೇ 7: ಕಾಡಾನೆ ದಾಳಿಗೊಳಗಾಗಿ ಇಬ್ಬರು ಸಿಆರ್ ಪಿಎಫ್ ಯೋಧರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಕಗ್ಗಲೀಪುರದ ಬಳಿ ನಡೆದಿದೆ.

ಇಲ್ಲಿನ ತರಳು ಎಸ್ಟೇಟ್ ಬಳಿ ಮುಂಜಾನೆ ವಾಕಿಂಗ್ ಹೊರಟಿದ್ದ ಸಿಆರ್ ಪಿಎಫ್ ಯೋಧರ ಮೇಲೆ ಕಾಡಾನೆ ದಾಳಿ ನಡೆಸಿದೆ. ಘಟನೆಯಲ್ಲಿ ಸಿಆರ್ ಪಿಎಫ್ ತರಬೇತಿ ಕ್ಯಾಂಪ್ ನಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ದಕ್ಷಿಣ ಮೂರ್ತಿ(52) ಸ್ಥಳದಲ್ಲೇ ಮೃತಪಟ್ಟಿದ್ದರೆ, ಗದಗ ಮೂಲದ ಪೇದೆ ಪುಟ್ಟಪ್ಪ(33) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ಮುಂಜಾನೆ ಆಹಾರ ಅರಸಿ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಕಗ್ಗಲೀಪುರ ವಲಯದ ಅರಣ್ಯ ಪ್ರದೇಶದಲ್ಲಿರುವ ಸಿಆರ್ ಪಿಎಫ್ ಸೇನೆ ಶಿಬಿರದ ಬಳಿ ಕಾಡಾನೆಗಳು ಬಂದಿವೆ. ಈ ಸಂದರ್ಭ ಅಲ್ಲೇ ವಾಕಿಂಗ್ ಹೊರಟಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟಪ್ಪರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ವಿಷಯ ತಿಳಿದ ಕಗ್ಗಲೀಪುರ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News