ನಾಳೆ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ರಕಟ
Update: 2017-05-07 13:06 IST
ಹೊಸದಿಲ್ಲಿ, ಮೇ 7: ಇಂಗ್ಲೆಂಡ್‌ನಲ್ಲಿ ಮುಂದಿನ ತಿಂಗಳೂ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ಗೆ ತೆರಳಲಿರುವ ಭಾರತದ ಕ್ರಿಕೆಟ್ ತಂಡ ಸೋಮವಾರ (ಮೇ 8)ಪ್ರಕಟಗೊಳ್ಳಲಿದೆ.
ಇಂದು ನಡೆದ ಬಿಸಿಸಿಐ ವಿಶೇಷ ಸಭೆಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನು ಕಳುಹಿಸುವ ನಿರ್ಧಾರ ಕೈಗೊಳ್ಳಲಾಯಿತು.
ಎಂಎಸ್‌ಎ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಗೆ ತಂಡದ ಆಯ್ಕೆ ಮಾಡುವಂತೆ ಬಿಸಿಸಿಐ ಸೂಚನೆ ನೀಡಿದೆ.