ಜಾಮಿಯಾ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಸಂಕೀರ್ಣ ಕಟ್ಟಡ ಉದ್ಘಾಟನೆ
ಚೊಕ್ಕಬೆಟ್ಟು, ಮೇ 7: ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕವಾಗಿ ಮುಂದುವರಿದಿದ್ದು, ಅಲ್ಪಸಂಖ್ಯಾತ ವರ್ಗಗಳ ಶೈಕ್ಷಣಿಕ ಸಂಸ್ಥೆಗಳ ಕೊಡುಗೆಯು ಮಹತ್ತರವಾಗಿದೆ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ನುಡಿದರು.
ಸುರತ್ಕಲ್ ಸಮೀಪದ ತಣ್ಣೀರುಬಾವಿ ಮುಹಿಯುದ್ದೀನ್ ಜುಮಾ ಮಸೀದಿ ಚೊಕ್ಕಬೆಟ್ಟು ಇವರ ಅಧೀನದಲ್ಲಿ ನಡೆಯುವ ಜಾಮಿಯಾ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಸಂಕೀರ್ಣ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ಬಿ.ಎ. ಮೊಯ್ದಿನ್ ಬಾವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿಯುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು.
ಮಿತ್ತಬೈಲು ಅಬ್ದುಲ್ ಜಬ್ಬಾರ್ ಉಸ್ತಾದ್ ದುಆ ನೆರವೇರಿಸಿದರು. ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ, ಮನಪಾ ಮೇಯರ್ ಕವಿತಾ ಸನಿಲ್, ಜಾತ್ಯತೀತ ಜನತಾದಳದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಕೆ. ಅಶ್ರಫ್, ಮನಪಾ ಸದಸ್ಯ ಅಯಾಝ್, ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ದಾರಿಮಿ, ಕೃಷ್ಣಾಪುರ 8 ಎ ವಿಭಾಗದ ಅಲ್‌ಹುದಾ ಮಸೀದಿಯ ಖತೀಬ್ ಲತೀಫ್, ಟಿ.ಎಚ್. ಹಂಝ, ತಣ್ಣೀರುಬಾವಿ ಮುಹಿಯುದ್ದೀನ್ ಜುಮಾ ಮಸೀದಿ ಚೊಕ್ಕಬೆಟ್ಟು ಅಧ್ಯಕ್ಷ ಎ.ಎಸ್. ಸಿದ್ದೀಕ್, ಜಾಮೀಯ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಷನ್ ಸಂಸ್ಥೆಯ ಅಧ್ಯಕ್ಷ ಜೆ. ಮುಹಮ್ಮದ್ ಹಾಗೂ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.
ಬಿ.ಎ. ಮುಹಮ್ಮದಲಿ ಕಾರ್ಯಕ್ರಮ ನಿರೂಪಿಸಿದರು.