ಕಾಂಗ್ರೆಸ್ ತೊರೆಯುವುದಿಲ್ಲ: ಸತೀಶ್ ಜಾರಕಿಹೊಳಿ
Update: 2017-05-08 19:58 IST
ಬೆಳಗಾವಿ, ಮೇ 8:ಕಾಂಗ್ರೆಸ್ ಪಕ್ಷವನ್ನು ತೊರೆಯುವ ಪ್ರಶ್ನೆ ಸದ್ಯಕ್ಕೆ ಉದ್ಭವಿಸಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಆಕಸ್ಮಿಕವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದೆ ಎಂದರು.
ಕುಮಾರಸ್ವಾಮಿಯನ್ನು ಭೇಟಿ ಮಾಡಿದನ್ನೇ ಮುಂದಿಟ್ಟುಕೊಂಡು ನಾನು ಜೆಡಿಎಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅಂದು ಪರಸ್ಪರ ಭೇಟಿಯಾಗಿದ್ದೇವೆ. ನಾನು ಸದಸ್ಯಕ್ಕೆ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಅವರು ಹೇಳಿದರು.