​ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ: ಡಿ.ಕೆ.ಶಿವಕುಮಾರ್

Update: 2017-05-08 15:09 GMT

ಬೆಂಗಳೂರು, ಮೇ 8: ಕೆಪಿಸಿಸಿಗೆ ನೂತನ ಅಧ್ಯಕ್ಷ ಯಾರಾಗಬೇಕು ಎಂಬುದರ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ನಾನು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬುದು ನಮ್ಮ ಗುರಿ. ಅದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ. ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿಗಳಿಗೆ ಸ್ವಾಗತ ಕೋರಲು ಇಲ್ಲಿಗೆ ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ಯಾವುದೆ ಚರ್ಚೆಗಳು ನಡೆದಿಲ್ಲ ಎಂದು ಅವರು ಹೇಳಿದರು.

ವಿಶ್ವನಾಥ್ ಭೇಟಿ: ರಾಜ್ಯದ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ರನ್ನು ಮಂಗಳವಾರ ಬೆಳಗ್ಗೆ 9:30ಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಭೇಟಿ ಮಾಡಲು ಸಮಯ ನಿಗದಿಯಾಗಿದೆ. ಪ್ರಸ್ತುತ ರಾಜ್ಯ ರಾಜಕಾರಣದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News