ಅಮಾನತು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2017-05-08 21:28 IST
ಮಂಡ್ಯ, ಮೇ 8: ಅಮಾನತುಗೊಂಡಿರುವ ಜೆಡಿಎಸ್‌ನ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಸೋಮವಾರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್‌ನ ಎಲ್ಲಾ ಏಳು ಶಾಸಕರೂ ಕಾಂಗ್ರೆಸ್ ಸೇರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಅಮಾನತು ಶಾಸಕ ಎನ್.ಚಲುವರಾಯಸ್ವಾಮಿ ಮಾತನಾಡಿ, ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಅವರೇ ಮತ್ತೊಮ್ಮೆ ಮುಖ್ಯಮಂತ್ರಿಯಾದರೆ ರಾಜ್ಯ ಮತ್ತಷ್ಟು ಅಭಿವೃದ್ಧಿಯಾಗುತ್ತದೆ. ಜೆಡಿಎಸ್‌ನಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಜೆಡಿಎಸ್‌ನವರು ಟಿಕೆಟ್ ನೀಡಬಾರದೆಂದು ಈಗಾಗಲೇ ತೀರ್ಮಾನಿಸಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಎಂದು ಹೇಳಿದರು.