ಕ್ಲಬ್‌ಗಳ ಮೇಲೆ ದಾಳಿ: 44 ಮಂದಿ ಸೆರೆ; ಲಕ್ಷಾಂತರ ರೂ. ವಶ
ಶಿವಮೊಗ್ಗ, ಮೇ 7: ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿರುವ ಎರಡು ಕ್ಲಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ಜೂಜಾಟ ದಲ್ಲಿ ತೊಡಗಿದ್ದ ಆರೋಪದ ಮೇರೆಗೆ 44 ಮಂದಿಯನ್ನು ಬಂಧಿಸಿ ಲಕ್ಷಾಂತರ ರೂ. ವಶಕ್ಕೆ ಪಡೆದುಕೊಂಡಿರುವ ಘಟನೆ ಸೋಮವಾರ ಪಟ್ಟಣದಲ್ಲಿ ನಡೆದಿದೆ.
ನಗರದ ಸಿಟಿ ಕ್ಲಬ್ ಹಾಗೂ ಸಹ್ಯಾದ್ರಿ ಕ್ಲಬ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು, ಬಂಧಿತ ಆರೋಪಿಗಳಿಂದ 2,77,808 ನಗದು, 41 ಮೊಬೈಲ್ ಫೋನ್, 8 ಕಾರುಗಳು, 16 ಬೈಕ್‌ಗಳು ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಶಿವಮೊಗ್ಗ ನಗರದ ಡಿಸಿಬಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಗಳು ದಾಖಲಾಗಿವೆ. ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್‌ಅವರ ಮೇಲ್ವಿಚಾರಣೆಯಲ್ಲಿ ಡಿಸಿಬಿ ಡಿಎಸ್ಪಿ ಪಂಪಾಪತಿ, ಡಿಸಿಬಿ ಇನ್‌ಸ್ಪೆಕ್ಟರ್ ಕೆ. ಕುಮಾರ್, ಡಿಎಸ್‌ಬಿ ಇನ್‌ಸ್ಪೆಕ್ಟರ್ ಮುತ್ತಣ್ಣ ಗೌಡ, ಡಿಸಿಐಬಿ ಇ ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಸಿಬ್ಬಂದಿ ಕಾರ್ಯಾ ಚರಣೆಯಲ್ಲಿ ಭಾಗವಹಿ ಸಿದ್ದರು.