ಭ್ರಷ್ಟ ಅಧಿಕಾರಿಗಳಿಗೆ ಉನ್ನತ ಹುದ್ದೆ: ಸಿಎಂ ಸೇರಿ ಮೂವರ ವಿರುದ್ಧ ಲೋಕಾಯುಕ್ತಕ್ಕೆ ದೂರು

Update: 2017-05-08 17:39 GMT

ಬೆಂಗಳೂರು, ಮೇ 8: ಭ್ರಷ್ಟ ಅಧಿಕಾರಿಗೆ ಉನ್ನತ ಹುದ್ದೆ ನೀಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ವಿ. ಪೊನ್ನರಾಜು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ವಿಶಾಲ್ ವಿರುದ್ಧ ಮಂಡ್ಯದ ಆರ್‌ಟಿಐ ಕಾರ್ಯಕರ್ತ ರವೀಂದ್ರ ದೂರು ನೀಡಿದ್ದಾರೆ.

ಕಾನೂನು ಬಾಹಿರವಾಗಿ ಪುಟ್ಟಸ್ವಾಮಿ ಅವರನ್ನು ವರ್ಗಾವಣೆ ಮಾಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 5ರಲ್ಲಿ ಇದ್ದ ವಲಯ ಆಯುಕ್ತರ ಹುದ್ದೆಗೆ ನಿಯೋಜಿಸಲಾಗಿದೆ. ಎ.25ರಂದು ಈ ಸಂಬಂಧ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಆದರೆ, ಈ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ ಪುಟ್ಟಸ್ವಾಮಿಗಿಲ್ಲ. ಕಾನೂನು ಬಾಹಿರವಾಗಿ ಇವರನ್ನು ನಿಯೋಜಿಸಲಾಗಿದೆ. ಇದಕ್ಕೆ ಸಿಎಂ ಅನುಮೋದಿಸಿದ್ದಾರೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News