ಮೇ 12ರಂದು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ
Update: 2017-05-09 14:21 IST
ಬೆಂಗಳೂರು, ಮೇ 9: ಎಸ್‌ಎಸ್‌ಎಲ್ ಸಿ ಫಲಿತಾಂಶ ಮೇ 12ರಂದು ಪ್ರಕಟಗೊಳ್ಳಲಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ತನ್ನ ವೆಬ್‌ಸೈಟ್ ನಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಮೇ 12ರಂದು ಮಧ್ಯಾಹ್ನ ಪ್ರಕಟಿಸಲಿದೆ.
ಮೇ 13ರಂದು ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ