ರಾಜ್ಯದ ಬರ ಪರಿಸ್ಥಿತಿ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ವರದಿ ನೀಡಲಾಗಿದೆ : ಸಿದ್ದರಾಮಯ್ಯ
ಮಂಗಳೂರು, ಮೆ.9:ರಾಜ್ಯದ ಬರ ಪರಿಸ್ಥಿತಿಯಿಂದ ಆಗಿರುವ ಹಾನಿಯ ಬಗ್ಗೆ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರನ್ನು ಇಂದು ಭೇಟಿಯಾಗಿ ವರದಿ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯಕ್ಕೆ ಎಐಪಿಸಿಸಿ ವೀಕ್ಷಕ ವೇಣುಗೋಪಾಲ್ ಭೇಟಿ ನೀಡಿರುವುದು ಮುಂದಿನ ಚುನಾವಣೆಯ ವಿಷಯದ ಬಗ್ಗೆ ಚರ್ಚಿಸಲು ಹೊರತು ಬೇರೆ ಯಾವ ವಿಷಯವನ್ನು ಚರ್ಚಿಸಿಲ್ಲ.ರಾಜ್ಯದ ಕಾಂಗ್ರೆಸ್ ಮುಖಂಡರ ಬಗ್ಗೆ ಯಾರೂ ದೂರು ನೀಡಿಲ್ಲ.ಕೆ.ಪಿ.ಸಿ.ಸಿ ಅಧ್ಯಕ್ಷರ ಆಯ್ಕೆ ಇನ್ನು ಅಂತಿಮ ಗೊಂಡಿಲ್ಲ.ಈ ಬಗ್ಗೆ ಹೈ ಕಮಾಂಡ್ ಅಂತಿಮ ವಾಗಿ ತೀರ್ಮಾನಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಧಾನ ಪರಿಷತ್‌ನ ಮೂರು ಸ್ಥಾನಗಳ ಆಯ್ಕೆಗೆ ಸಂಬಂಧಿಸಿದಂತೆ ಹೈಕಮಾಂಡಿಗೆ ಹೆಸರು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರಕಾರ ನಾಲ್ಕು ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.ಸರಕಾರದ ಸಾಧನೆಯ ಬಗ್ಗೆ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯ ಮಂತ್ರಿ ಪುತ್ರನ ವಿರುದ್ಧ ಬೇನಾಮಿ ಆಸ್ತಿಯ ಬಗ್ಗೆ ದೂರು ನೀಡಲಾಗಿದೆ ಈ ಬಗ್ಗೆ ಪ್ರತಿಕ್ರೀಯೆ ನೀಡಿದ ಸಿದ್ದರಾಮಯ್ಯ ಅದು ರಾಜಕೀಯ ಪ್ರೇರಿತ ಪಿತೂರಿ,ಆಧಾರ ರಹಿತವಾದ ಆರೋಪವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಅರಣ್ಯ,ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ .ಪಾಟೀಲ್,ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್, ಡಾ.ಎಚ್.ಸಿ. ಮಾಹದೇವಪ್ಪ ,ಶಾಸಕರಾದ ಅಭಯ ಚಂದ್ರ ಜೈನ್,ಮೊಹಿಯುದ್ಧೀನ್ ಬಾವ,ಮೇಯರ್ ಕವಿತಾ ಸನಿಲ್,ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.