ಬಿಜೆಪಿಗೆ ರಾಜಾರಾವ್ ರಾಜಿನಾಮೆ
Update: 2017-05-09 21:37 IST
ಮಡಿಕೇರಿ,ಮೇ9: ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರು ಹಾಗೂ ಜಿಲ್ಲಾ ಬಿಜೆಪಿ ಪರಿಶಿಷ್ಟ ಮೋರ್ಚಾದ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಪಕ್ಷದ ಕೆಲವು ಮುಖಂಡರ ವರ್ತನೆಯಿಂದ ಬೇಸತ್ತು ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.
ಪಕ್ಷದ ಜಿಲ್ಲಾಧ್ಯಕ್ಷರಿಗೆ ಬುಧವಾರ ರಾಜೀನಾಮೆ ಪತ್ರವನ್ನು ಸಲ್ಲಿಸುವುದಾಗಿ ಹೇಳಿರುವ ರಾಜಾರಾವ್,ಕಳೆದ 8 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಎಲ್ಲಾ ಹಂತಗಳಲ್ಲಿ ಪಕ್ಷ ಅಧಿಕಾರದಚುಕ್ಕಾಣಿ ಹಿಡಿಯುವಲ್ಲಿ ಮನಪೂರ್ವಕವಾಗಿ ಶ್ರಮಿಸಿದ್ದೇನೆ ಎಂದರು.
ತನ್ನ ರಾಜಿನಾಮೆಯೊಂದಿಗೆ ಜಿಲ್ಲೆಯಲ್ಲಿರುವಬೆಂಬಲಿರು ಕೂಡ ಪಕ್ಷ ತ್ಯಜಿಸುವ ಬಗ್ಗೆ ಹೇಳಿದ್ದಾರೆ. ತಾನು ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ರಾಜಾರಾವ್ ಸ್ಪಷ್ಟಪಡಿಸಿದ್ದಾರೆ.