×
Ad

ಹಳೆ ನೋಟು ಬದಲಾವಣೆ ಪ್ರಕರಣ:ಇಬ್ಬರ ಬಂಧನ

Update: 2017-05-10 19:00 IST

ಬೆಂಗಳೂರು, ಮೇ 10: ಅಮಾನ್ಯಗೊಂಡಿರುವ ಗರಿಷ್ಠ ಮುಖಬೆಲೆಯ 500 ಮತ್ತು 1 ಸಾವಿರ ರೂ. ಮುಖಬೆಲೆಯ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಲ್ಲಿನ ಬಸವನಗುಡಿ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ 95 ಲಕ್ಷ ಹಳೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಶಿವರಾಮಪುರಂ ನಿವಾಸಿ ಸಾಯಿಕಿರಣ್(32), ಹಬ್ಬಿಗೆರೆಯ ರಾಜೇಶ್‌ಕುಮಾರ್(40) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಎಸ್.ಡಿ. ಶರಣಪ್ಪಮಾಹಿತಿ ನೀಡಿದರು.

ಆರೋಪಿಗಳು ಬಸವನಗುಡಿಯ ಕೃಷ್ಣರಾವ್ ಪಾರ್ಕ್‌ನ ಮುಖ್ಯ ಬಾಗಿಲು ಬಳಿ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಬ್ಬರು ಲೆನ್ಸ್ ವ್ಯವಹಾರ ನಡೆಸುತ್ತಿದ್ದು, ತಮ್ಮಲ್ಲಿದ್ದ ಹಳೆಯ ಹಣವನ್ನು ಬದಲಾಯಿಸಿಕೊಳ್ಳಲು ಯತ್ನಿಸುತ್ತಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಇವರಿಂದ 1 ಸಾವಿರ ಮುಖಬೆಲೆಯ 95 ಲಕ್ಷ ನೋಟುಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News