ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

Update: 2017-05-10 13:51 GMT

ಪುತ್ತೂರು, ಮೇ 10: ಸರಕಾರದ ನಿರ್ದೇಶನದಂತೆ ಪುತ್ತೂರು ತಾಲೂಕು ಆಡಳಿತ ಕಚೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಬುಧವಾರ ಇಲ್ಲಿನ ಮಿನಿ ವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

ತಹಶೀಲ್ದಾರ್ ಅನಂತಶಂಕರ್  ಕಾರ್ಯಕ್ರಮ ಉದ್ಘಾಟಿಸಿದರು. ಉಪತಹಶೀಲ್ದಾರ್ ಶ್ರೀಧರ್ ಕೆ. ಮಾತನಾಡಿ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಕ್ತಿವಂತಳು. ಆಕೆಯ ಆಚಾರ ವಿಚಾರ, ಶರಣರ ತತ್ವದಾರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಕೊಂಡರೆ ಮಾನವ ಜನ್ಮ ನಿಜಕ್ಕೂ ಸಾರ್ಥಕವಾದಂತೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಉಪ ತಹಶೀಲ್ದಾರ್ ಶಶಿಕಲಾ ಉಪಸ್ಥತರಿದ್ದರು. ಉಪ್ಪಿನಂಗಡಿ ಕಂದಾಯ ಅಧಿಕಾರಿ ಪ್ರಸನ್ನ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News