ಉಡುಪಿ: ಪ್ಲಾಸ್ಟಿಕ್ ನಿಷೇಧ ಜಾರಿಗೆ ಸಭೆ
Update: 2017-05-10 20:32 IST
ಉಡುಪಿ, ಮೇ 10: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಮೇ 12ರ ಅಪರಾಹ್ನ 3:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯೊಂದನ್ನು ಕರೆಯಲಾಗಿದೆ.
ಪ್ರಮುಖವಾಗಿ ಹೊಟೇಲ್, ಬಾರ್ ರೆಸ್ಟೋರೆಂಟ್, ಮಾಲ್, ಪ್ರೊವಿಜನ್ ಸ್ಟೋರ್ಸ್ ಮತ್ತು ಬುಕ್ ಸೆಂಟರ್‌ಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಕಾರ್ಯರೂಪಕ್ಕೆ ತರಲು ಸಮಾಲೋಚನೆ ನಡೆಸಲಾಗುವುದು. ಈ ಸಭೆಯಲ್ಲಿ ಹೊಟೇಲ್, ಬಾರ್, ರೆಸ್ಟೋರೆಂಟ್, ಮಾಲ್, ಪ್ರೊವಿಜನ್ ಸ್ಟೋರ್ಸ್ ಮತ್ತು ಬುಕ್ ಸೆಂಟರ್‌ಗಳ ಮಾಲಕರು ಕಡ್ಡಾಯವಾಗಿ ಹಾಜರಿರುವಂತೆ ಉಡುಪಿ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.