ಲಾರಿ-ರಿಕ್ಷಾ ಢಿಕ್ಕಿ: ಪ್ರಯಾಣಿಕ ಮೃತ್ಯು
Update: 2017-05-10 22:06 IST
ಪಡುಬಿದ್ರೆ, ಮೇ 10: ಇಲ್ಲಿನ ಗೂಡು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ 10:50ರ ಸುಮಾರಿಗೆ ಲಾರಿ ಮತ್ತು ರಿಕ್ಷಾ ಮಧ್ಯೆ ಸಂಭವಿ ಸಿದ ಅಪಘಾತದಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೂಳೂರಿನ ವಿಲ್ಪ್ರೇಡ್ ಡಿಸೋಜ ಎಂಬವರ ರಿಕ್ಷಾಕ್ಕೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ಇದರಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಾಧವ ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.