ಅಕ್ರಮ ಮದ್ಯ: ಆರೋಪಿ ವಶ
Update: 2017-05-10 22:48 IST
ಚಿಕ್ಕಮಗಳೂರು, ಮೇ 10: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಬಂಧಿಸಿರುವ ಡಿಸಿಬಿ ಪೊಲೀಸರು ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಮಲ್ಲಂದೂರಿನ ಚೇತನ ಎಂದು ಗುರುತಿಸಲಾಗಿದೆ. ಆರೋಪಿಯು ನಗರದ ಎನ್‌ಎಂಸಿ ವೃತ್ತದ ಬಳಿ ಚೀಲದಲ್ಲಿ ಅಕ್ರಮ ಮದ್ಯವನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ.
ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು 1,350 ರೂ. ವೌಲ್ಯದ 48 ಅಕ್ರಮ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.