×
Ad

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಸಂಜಯ್, ಶ್ರೀಧರ್‌ರನ್ನು ತಂಡದಲ್ಲಿ ಉಳಿಸಿಕೊಂಡ ಬಿಸಿಸಿಐ

Update: 2017-05-10 23:29 IST

ಮುಂಬೈ, ಮೇ 10: ಮುಂದಿನ ತಿಂಗಳು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ತನಕ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಸೇವೆಯನ್ನು ಉಳಿಸಿಕೊಳ್ಳಲು ಬಿಸಿಸಿಐ ಬಯಸಿದೆ.

ಬಂಗಾರ್ ಹಾಗೂ ಶ್ರೀಧರ್ ಅವರ ಒಪ್ಪಂದದ ಅವಧಿ ಮಾರ್ಚ್‌ನಲ್ಲಿ ಕೊನೆಗೊಂಡಿತ್ತು. ಇಂಗ್ಲೆಂಡ್‌ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಲಿರುವ ಸಹಾಯಕ ಸಿಬ್ಬಂದಿಗಳ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಕಪಿಲ್ ಮಲ್ಹೋತ್ರಾ ತಂಡದ ಮ್ಯಾನೇಜರ್ ಆಗಿ ಆಯ್ಕೆಯಾಗಿದ್ದಾರೆ.

ಕಳೆದ ವರ್ಷ ಆಸ್ಟ್ರೇಲಿಯ ವಿರುದ್ಧ ಸೀಮಿತ ಓವರ್ ಪ್ರವಾಸದಲ್ಲಿ ತಂಡದೊಂದಿಗಿದ್ದ ಕಪಿಲ್ ಅವರು ಅನಿಲ್ ಪಟೇಲ್ ಬದಲಿಗೆ ಆಯ್ಕೆಯಾಗಿದ್ದಾರೆ.

 ಬಂಗಾರ್ ಹಾಗೂ ಶ್ರೀಧರ್ ಸೇವೆಯನ್ನು ಜೂನ್ ತನಕ ವಿಸ್ತರಿಸಲು ನಿರ್ಧರಿಸಲಾಗಿದೆ. ಸಪೋರ್ಟ್ ಸ್ಟಾಫ್‌ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಪಿಲ್ ಮಲ್ಹೋತ್ರಾ ತಂಡದ ಮ್ಯಾನೇಜರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆಂದು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News