ಯುವಕನ ತಲೆ ಕತ್ತರಿಸಿ ಪೊಲೀಸ್ ಠಾಣೆಗೆಸೆದ ದುಷ್ಕರ್ಮಿಗಳು
Update: 2017-05-11 11:06 IST
ಪುದುಚೇರಿ, ಮೇ 11: ಯುವಕನೊಬ್ಬನ ಮೇಲೆ ಬರ್ಬರ ದಾಳಿ ನಡೆಸಿದ ತಂಡವೊಂದು ಆತನ ತಲೆಯನ್ನು ಕತ್ತರಿಸಿ ಪೊಲೀಸ್ ಠಾಣೆಗೆಸೆದ ಘಟನೆ ತಮಿಳುನಾಡಿನ ಪುದುಚೇರಿ ಎಂಬಲ್ಲಿ ನಡೆದಿದೆ.
ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಪೊಲೀಸ್ ಠಾಣೆಯುದುರು ಬೈಕ್ ನಿಲ್ಲಿಸಿ ಯುವಕನ ತಲೆಯನ್ನು ಎಸೆದು ಹೋಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೃತ ಯುವಕನನ್ನು ಇತ್ತೀಚೆಗೆ ಪುದುಚೇರಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗಿದೆ. ತಲೆ ಎಸೆಯಲ್ಪಟ್ಟ ಪೊಲೀಸ್ ಠಾಣೆಯಿಂದ 3 ಕಿ.ಮೀ. ದೂರದಲ್ಲಿರುವ ಕೊಳವೊಂದರಲ್ಲಿ ಯುವಕನ ದೇಹ ಪತ್ತೆಯಾಗಿದೆ.
ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.