ಬೆಂಗಳೂರಿನಲ್ಲಿ "ವರುಣ" ಸ್ಟುಡಿಯೋ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2017-05-11 07:09 GMT

ಬೆಂಗಳೂರು, ಮೇ 11: ಮಾಧ್ಯಮಗಳ ಜೊತೆ ಮುಖ್ಯಮಂತ್ರಿಯ ಸಂವಾದಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒಂದೇ ಸೂರಿನಡಿ ಕಲ್ಪಿಸುವ "ವರುಣ" ಸ್ಟುಡಿಯೋವನ್ನು ಗೃಹ ಕಚೇರಿ ಕೃಷ್ಣ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಮಾಧ್ಯಮಗಳ ಅವಶ್ಯಕತೆಗಳನ್ನು ಗಣನೆಗೆ ತೆಗೆದುಕೊಂಡು ಅತ್ಯಾಧುನಿಕ ತಂತ್ರಜ್ಞಾನವನ್ನು ಈ ಸ್ಟುಡಿಯೊದಲ್ಲಿ ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳ ವಸತಿ ಮತ್ತು ಗೃಹ ಕಚೇರಿಗಳಲ್ಲಿ ಸ್ಥಳಾವಕಾಶದ ಕೊರತೆ ಇರುವ ಕಾರಣಕ್ಕಾಗಿ, ಗೃಹಕಚೇರಿ ಕೃಷ್ಣಾಕ್ಕೆ ಹೊಂದಿಕೊಂಡಂತೆ ಸುಸಜ್ಜಿತ ಸ್ಟುಡಿಯೋ ನಿರ್ಮಿಸಲಾಗಿದೆ.

ಸ್ಟುಡಿಯೋದಲ್ಲಿ ಮುಖ್ಯಮಂತ್ರಿಯನ್ನು ಸಂದರ್ಶಿಸಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ, ಬೆಳಕು, ಅಗತ್ಯಕ್ಕೆ ತಕ್ಕಂತೆ ಬದಲಾಯಿಸಬಹುದಾದ ಹಿನ್ನೆಲೆ ಪರದೆ, ಟೆಲಿಪ್ರಾಂಪ್ಟರ್, ರೆಕಾರ್ಡಿಂಗ್ ಸಲಕರಣೆಗಳು, ಕಂಪ್ಯೂಟರ್ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 

ಎಲೆಕ್ಟ್ರಾನಿಕ್ ಮಾಧ್ಯಮಗಳ ವರದಿಗಾರರು ತಮ್ಮ ಕ್ಯಾಮರಾಗಳ ಜತೆ ನೇರವಾಗಿ ಬಂದು ಈ ಸ್ಟುಡಿಯೋದಲ್ಲಿ ಸಂದರ್ಶನಗಳನ್ನು ನಡೆಸಬಹುದು. ಇದರ ಜತೆಗೆ ಮುಖ್ಯಮಂತ್ರಿ ಕಾಲಕಾಲಕ್ಕೆ ನೀಡುವ ಸಂದೇಶಗಳು, ಹೇಳಿಕೆಗಳ ರೆಕಾರ್ಡಿಂಗ್ ಕೂಡಾ ಈ ಸ್ಟುಡಿಯೋದಲ್ಲಿ ನಡೆಸಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News