ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು
Update: 2017-05-11 16:27 IST
ತುಮಕೂರು, ಮೇ 11: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಏರು-ಪೇರಾಗಿದ್ದು, 2 ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
110 ವಯಸ್ಸಿನ ಶ್ರೀಗಳ ಆರೋಗ್ಯದಲ್ಲಿ ಕಳೆದ ರಾತ್ರಿಯಿಂದ ಕೊಂಚ ಏರು-ಪೇರಾಗಿದ್ದು, ವೈದ್ಯರ ತಂಡ ಮಠದಲ್ಲೇ ಶ್ರೀಗಳ ಆರೋಗ್ಯ ತಪಾಸಣೆ ನಡೆಸುತ್ತಿದೆ. ಬಳಲಿಕೆಯ ಹಿನ್ನೆಲೆಯಲ್ಲಿ ಶ್ರೀಗಳಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಸಿದ್ಧಗಂಗಾ ಮಠಕ್ಕೆ ಪ್ರಭಾರ ಎಸ್ಪಿ ಲೋಕೇಶ್ ಕುಮಾರ್ ಭೇಟಿ ನೀಡಿದ್ದಾರೆ.