ಮರು ಮೌಲ್ಯಮಾಪನಕ್ಕೆ ಅರ್ಜಿ ಸ್ವೀಕರಿಸಲು ಮೇ 24 ಕೊನೆಯ ದಿನ

Update: 2017-05-11 14:29 GMT

ಬೆಂಗಳೂರು, ಮೇ 11: ಮರು ಮೌಲ್ಯಮಾಪನಕ್ಕೆ ಅರ್ಜಿ ಸ್ವೀಕರಿಸಲು ಮೇ 24 ಕೊನೆಯ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ ಶುಲ್ಕ 1260 ರೂಪಾಯಿ ಎಂದು ಹೇಳಿದರು.

ಗುರುವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರು ಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು ಎಂದು ಹೇಳಿದರು.

ಮರು ಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಫಲಿತಾಂಶವನ್ನು ಪರಿಷ್ಕರಿಸಿ ಪ್ರಕಟಿಸಲಾಗುವುದು. ಅಲ್ಲದೆ, ಎಸ್‌ಎಲ್‌ಪಿಇ ಕಾಯ್ದೆ-1997, 29(ಅ) ಅನ್ವಯ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗೆ ಈ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

www.pue.kar.nic.in  ಮರು ಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆಯ ನಲ್ಲಿ ಆಯಾ ದಿನವೇ ಪ್ರಕಟಿಸಲಾಗುವುದು. ಅಂಕಗಳ ಮರು ಎಣಿಕೆಗೆ ಅರ್ಜಿ ಸ್ವೀಕರಿಸಲು ಮೇ 24 ಕೊನೆಯ ದಿನ. ಅಂಕಗಳ ಮರು ಎಣಿಕೆಗೆ ಶುಲ್ಕ ಇರುವುದಿಲ್ಲ. ಮರು ಎಣಿಕೆ ಫಲಿತಾಂಶವನ್ನು ಅಂತರ್ಜಾಲದಲ್ಲಿ ಆಯಾ ದಿನವೇ ಪ್ರಕಟಿಸಲಾಗುವುದು ಎಂದು ಹೇಳಿದರು.

 ಉತ್ತರ ಪತ್ರಿಕೆಯ ಸ್ಕಾನಿಂಗ್ ಪ್ರತಿಗಾಗಿ ಅರ್ಜಿ ಸ್ವೀಕರಿಸಲು ಮೇ 19 ಕೊನೆಯ ದಿನವಾಗಿದ್ದು, ಸ್ಕಾನಿಂಗ್ ಪ್ರತಿ ಪಡೆಯಲು ಶುಲ್ಕ ಪ್ರತಿ ವಿಷಯಕ್ಕೆ 400 ರೂ. ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News