×
Ad

ಎಸೆಸೆಲ್ಸಿ ಪರೀಕ್ಷೆ: ಮೂವರಿಗೆ 625ರಲ್ಲಿ 625 ಅಂಕ!

Update: 2017-05-12 14:39 IST
ಪೂರ್ಣಾನಂದ ಎಚ್.          ಸುಮಂತ್ ಹೆಗ್ಡೆ 

ಬೆಂಗಳೂರು, ಮೇ 12: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ 100 ಶೇ. ಅಂಕಗಳನ್ನು ಗಳಿಸಿದ ಸಾಧನೆ ಮೆರೆದಿದ್ದಾರೆ.

ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದ ಸೈಂಟ್ ಜಾಕಿಮ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ಪೂರ್ಣಾನಂದ ಎಚ್. ಈತ ಸ್ಥಳೀಯ ನಿವಾಸಿ ವಿಷ್ಣುಮೂರ್ತಿ ಮತ್ತು ಸವಿತಾ ದಂಪತಿಯ ಪುತ್ರನಾಗಿದ್ದಾನೆ.

ಮಲ್ಲೇಶ್ವರಂನ 10ನೆ ಮೈನ್‌ನ ಎಂ.ಇ.ಎಸ್.ಕಿಶೋರ್ ಕೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿ ಸುಮಂತ್ ಹೆಗ್ಡೆ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿಯ ಎಸ್.ಆರ್.ಎ. ಸಂಯುಕ್ತ ಜ್ಯೂನಿಯರ್ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ ಪಲ್ಲವಿ ಶಿರಹಟ್ಟಿ ಉಳಿದಿಬ್ಬರು 100 ಶೇ. ಫಲಿತಾಂಶ ದಾಖಲಿಸಿರುವ ವಿದ್ಯಾರ್ಥಿಗಳಾಗಿದ್ದಾರೆ.

ಮಂಗಳೂರಿನ ಸೈಂಟ್ ಆ್ಯಗ್ನೆಸ್ ಹೆಣ್ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯನಿ ಆರ್. ನಾಥ್ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News