ಎಸೆಸೆಲ್ಸಿ: ಕ್ರೀಡಾ ಹಾಸ್ಟೆಲ್ ವಿದ್ಯಾರ್ಥಿಗಳ ಶೇ.100 ಸಾಧನೆ
Update: 2017-05-12 23:17 IST
ಉಡುಪಿ, ಮೇ 12: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ನಡೆಸಲಾಗುತ್ತಿರುವ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ 2016-17ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 17 ಕ್ರೀಡಾಪಟುಗಳಲ್ಲಿ ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ, 14 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ಕ್ರೀಡಾಪಟು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರಲ್ಲಿ ಪ್ರಜ್ಞಾ ಕೆ. ಶೇ.97 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಇವರು ಗುಜರಾತ್‌ನ ವಡೋದರಾದಲ್ಲಿ ನಡೆದ 62ನೇ ರಾಷ್ಟ್ರೀಯ ಶಾಲಾ 17 ವರ್ಷದೊಳಗಿನ ಬಾಲಕ-ಬಾಲಕಿಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ 400ಮೀ.ಓಟವನ್ನು 58.05ಸೆ.ನಲ್ಲಿ ಕ್ರಮಿಸಿ ರಾಷ್ಟ್ರ ಮಟ್ಟದಲ್ಲಿ ಕಂಚಿನ ಪದಕ ಪಡೆದಿದ್ದರು.
ಕ್ರೀಡೆ ಮತ್ತು ಶಿಕ್ಷಣ ಎರಡರಲ್ಲೂ ಅತ್ಯುತ್ತಮ ಸಾಧನೆ ತೋರಿರುವ ಈ ಕ್ರೀಡಾಪಟುಗಳನ್ನು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮದ್ವರಾಜ್ ಅಭಿನಂದಿಸಿದ್ದಾರೆ.