ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಮೃತ್ಯು
Update: 2017-05-13 17:39 IST
ಬೀದರ್, ಮೇ 13: ಕಾರೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಸಂಭವಿಸಿದೆ.
ಮೃತರನ್ನು ನೇಹಾ ಚಾವ್ಲಾ (31), ಜಿನಲ್ ಮಯೂರ ಚಾವ್ಲಾ (30), ಖಯಾಮ್ ಮಯೂರ್ ಚಾವ್ಲಾ (6), ನಿಹಾಲ್ ಚಾವ್ಲಾ (31), ಭಾರತಿ ತರುಣ್ ಚಾವ್ಲಾ (58) ಎಂದು ಗುರುತಿಸಲಾಗಿದ್ದು, ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಹೈದರಾಬಾದ್‌ನಿಂದ ಮುಂಬೈಗೆ ತೆರಳುವ ಮಾರ್ಗಮಧ್ಯೆ ಈ ಅವಘಡ ಸಂಭವಿಸಿದೆ. ಕಾರು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ. ತ್ರಿಶಾ ಚಾವ್ಲಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಬಸವಕಲ್ಯಾಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.