ಮೇ 15ರಿಂದ ಎಜೆ ಆಸ್ಪತ್ರೆಯಲ್ಲಿ ಕಿಡ್ನಿ ಕಾಯಿಲೆಯ ಉಚಿತ ತಪಾಸಣೆ

Update: 2017-05-13 13:07 GMT

ಭಟ್ಕಳ, ಮೇ 13: ಮಂಗಳೂರು ಎಜೆ ಆಸ್ಪತ್ರೆಯಲ್ಲಿ ಮೇ15 ರಿಂದ 30ರ ತನಕ ಉಚಿತ ಮೂತ್ರಪಿಂಡ (ಕಿಡ್ನಿ) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೆಜರ್ ಶಿವಪ್ರಸಾದ್ ಶೆಟ್ಟಿ ತಿಳಿಸಿದರು.

ಅವರು ಶನಿವಾರ ಇಲ್ಲಿನ ಹೊಟೇಲ್ ರಾಯಲ್ ಓಕ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು.

ಎಜೆ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರವು ಕಳೆದ ಹಲವು ವರ್ಷಗಳಿಂದ ಅನೇಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸುತ್ತ ಬಂದಿದ್ದು ಸಾವಿರಾರು ರೋಗಿಗಳು ಇದರಿಂದ ಪ್ರಯೋಜನ ಪಡೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕಿಡ್ನಿ ತಪಾಸಣಾ ಶಿಬಿರದ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೂತ್ರಪಿಂಡದಲ್ಲಿ ಕಲ್ಲು, ಪ್ರೋಗ್ರಂಥಿ ಸಂಬಂಧಿ ತೊಂದರೆ, ಮೂತ್ರಪಿಂಡ ವೈಫಲ್ಯತೆ ಹಾಗೂ ಮೂತ್ರಪಿಂಡಕ್ಕೆ ಸಂಬಂಧಿಸಿದ ವಿವಿಧ ತೊಂದರೆಗಳಿಗೆ ಉಚಿತವಾಗಿ ತಪಾಸಣೆ ನಡೆಸಲಾಗುವುದು. ಮೂತ್ರಪಿಂಡ ಕಸಿ ಅಗತ್ಯವಿದ್ದಲ್ಲಿ ಕಾನೂನುಬದ್ಧವಾಗಿ ರೀಯಾಯಿತಿ ದರದಲ್ಲಿ ಮೂತ್ರಪಿಂಡ ಕಸಿಯನ್ನು ಮಡಲಾಗುವುದು ಎಂದು ಅವರು ತಿಳಿಸಿದರು.

ಶಿಬರದಲ್ಲಿ ಭಾಗವಹಿಸಲು ತಮ್ಮ ಹೆಸರನ್ನು ಮುಂಚಿತವಾಗಿ ನೊಂದಾಯಿಸಕೊಳ್ಳಬೇಕಾಗಿದ್ದು ವಿವರಗಳಿಗೆ 0824-6613252 ಅಥವಾ 8494890600 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಹಮ್ಮದ್ ಅಶ್ರಫ್ ಸಾದಾ ಹಾಗೂ ಸಮಾಜ ಸೇವಕ ನಝೀರ್ ಕಾಶಮಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News