ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ "ಸ್ನೇಹ ಮಿಲನ" ಕಾರ್ಯಕ್ರಮ

Update: 2017-05-13 13:48 GMT

ಕೊಣಾಜೆ, ಮೇ 13: ದೇರಳಕಟ್ಟೆ ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸೇವೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿ ಜನಪ್ರಿಯಗೊಳಿಸುವಲ್ಲಿ ಮುಖ್ಯ ಪಾತ್ರವಹಿಸಿದ ಸ್ನೇಹಿತರು, ಹಿತೈಷಿಗಳು ಮತ್ತು ಸೇವಾಸಂಸ್ಥೆಗಳನ್ನು ಗುರುತಿಸಿ ಪ್ರಶಂಸಿಸುವ ಮತ್ತು ಸನ್ಮಾನಿಸುವ ಕಾರ್ಯಕ್ರಮ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಯೆನೆಪೊಯ  ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಂ. ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ,ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ಚಿಕಿತ್ಸೆಗಾಗಿ ಯೆನೆಪೊಯ  ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕೈಗೊಂಡ ಅತ್ಯಾಧುನಿಕ ತಪಾಸಣೆ ಹಾಗೂ ಚಿಕಿತ್ಸಾ ವ್ಯವಸ್ಥೆಗಳ ಬಗ್ಗೆ ವಿವರಿಸಿದರು.

ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮಹಮ್ಮದ್ ಅಮೀನ್ ವಾಣಿ ಮಾತನಾಡಿ, ಒಂದು ವರ್ಷದಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ನೀಡಲು ಆಸ್ಪತ್ರೆಯಲ್ಲಿ ಆಳವಡಿಸಿದ ಅತ್ಯಾಧುನಿಕ ತಪಾಸಣೆ ಹಾಗೂ ಚಿಕಿತ್ಸೆ ವ್ಯವಸ್ಥೆಯ ಬಗ್ಗೆ ವಿವರಿಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ವಿಚಾರ ವಿನಿಮಯ ಗೋಷ್ಟಿಯಲ್ಲಿ ಆಸ್ಪತ್ರೆಯ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಡಾ.ಮುಹಮ್ಮದ್ ಅಮಿನ್ ವಾಣಿ, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಶ್ರೀಕುಮಾರ್ ಮೆನನ್, ಡಾ.ಸುನಿತಾ ಸಲ್ಡಾನ, ಡಾ.ಮಹಮ್ಮದ್ ಗುತ್ತಿಗಾರ್, ಮಾರ್ಕೆಟಿಂಗ್ ವಿಭಾಗದ ವಿಜಯಾನಂದ್ ಶೆಟ್ಟಿ, ನರ್ಸಿಂಗ್ ಸೇವೆಯ ಮುಖ್ಯಾಧಿಕಾರಿ ಸಿಸ್ಟರ್ ಐಲಿನ್ ಮಥಾಯಿಸ್‌ ಉಪಸ್ಥಿತರಿದ್ದರು.

ಈ ಸಂದರ್ಭ ಕೇರಳ ಹಾಗೂ ಕರ್ನಾಟಕ ಪ್ರಾಂತ್ಯದ 3 ಸೇವಾ ಸಂಸ್ಥೆಗಳೊಂದಿಗೆ ಆರೋಗ್ಯ ಸೇವಾ ವಿಸ್ತರಣೆ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಯಿತು.

ವೈದ್ಯಕೀಯ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ.ಮುಹಮ್ಮದ್ ಗುತ್ತಿಗಾರ್‌  ಸ್ವಾಗತಿಸಿದರು. ಹಾಗೂ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾರ್ಕೆಟಿಂಗ್ ವಿಭಾಗದ ವಿಜಯಾನಂದ ಶೆಟ್ಟಿ ವಂದಿಸಿದರು. ಸಮಾಜಕಾರ್ಯ ವಿಭಾಗ ಮತ್ತು ಮಾರ್ಕೆಟಿಂಗ್ ವಿಭಾಗಗಳ ಅಬ್ದುರ್ರಝಾಕ್, ಶಿವಪ್ರಸಾದ್, ಉಮ್ಮರ್ ಶಾಫಿ ಹಾಗೂ ವಿನ್ಸೆಂಟ್ ಕಾರ್ಯಕ್ರಮದ ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News