×
Ad

ಪ್ರತಿ ಆಸ್ಪತ್ರೆಗಳಲ್ಲಿ ಹೆಲ್ಪ್‌ಡೆಸ್ಕ್ ಆರಂಭಕ್ಕೆ ಚಿಂತನೆ: ಜಿಲ್ಲಾಧಿಕಾರಿ

Update: 2017-05-14 21:11 IST

 ಉಡುಪಿ, ಮೇ 14: ವಿವಿಧ ಕಾರಣಗಳಿಂದ ಆಸ್ಪತ್ರೆಗಳಲ್ಲಿ ಸಂಭವಿಸುವ ಅಹಿತಕರ ಘಟನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಆಸ್ಪತ್ರೆಗಳಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದ್ದು, ಶೀಘ್ರವೇ ಇದನ್ನು ಅನು ಷ್ಠಾನಕ್ಕೆ ತರಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ಶುಶ್ರೂಷಕರ ಸಂಘದ ವತಿಯಿಂದ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಅಂತಾ ರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಹಾಗೂ ಫ್ಲಾರೆನ್ಸ್ ನೈಟಿಂಗೇಲ್ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದರು.

ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟಾಗ ಒತ್ತಡದಲ್ಲಿ ಕೆಲಸ ಮಾಡುವ ವೈದ್ಯರು, ಶುಶ್ರೂಷಕರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗುತ್ತದೆ. ಇದನ್ನು ನಿಯಂತ್ರಿಸಲು ಪ್ರತಿ ಆಸ್ಪತ್ರೆಯಲ್ಲಿಯ್ಲೂ ಹೆಲ್ಪ್ ಡೆಸ್ಕ್‌ಗಳನ್ನು ಸ್ಥಾಪಿಸ ಲಾಗುವುದು. ಇಂತಹ ಸಂದರ್ಭದಲ್ಲಿ ಹೆಲ್ಪ್‌ಡೆಸ್ಕ್‌ನ ಅಧಿಕಾರಿಗಳು ರೋಗಿಯ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿ ವಾಸ್ತಾಂಶ ಅರ್ಥೈಸುವ ಕೆಲಸ ಮಾಡ ಬೇಕು. ಇದರಿಂದ ಈ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಉಪ ಜಿಲ್ಲಾ ಗವರ್ನರ್ ವಿ.ಜಿ.ಶೆಟ್ಟಿ, ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ.ರಾವ್, ಮಣಿಪಾಲ ನರ್ಸಿಂಗ್ ಕಾಲೇಜಿನ ಪ್ರೊ.ಕ್ರಿಸ್ಟೋರ್ ಸುಧಾಕರ್, ಸಕ್ಕು ಮೊದ ಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಹಿರಿಯ ಶುಶ್ರೂಷಕ ಅಧೀಕ್ಷಕರನ್ನು ಸನ್ಮಾನಿಸಲಾ ಯಿತು. ವೈಲೆಂಟ್ ಡಿಸೋಜ ಅವರಿಗೆ ಶುಶ್ರೂಷಾ ರತ್ನ ಪ್ರಶಸ್ತಿ ನೀಡಿ ಗೌರವಿಸ ಲಾಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಸ್ವಾಗತಿಸಿದರು. ಸಜನಿ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News